Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.
ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ. ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಬಿಜೆಪಿ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಸಿಎಂ ಹೇಳಿದ್ದಾರೆ.
ಗರಗದಲ್ಲೂ ಸ್ವಯಂ ಪ್ರೇರಣೆಯ ಬಂದ್: ನೇಹಾ ಕುಟುಂಬದ ಪರ ನಿಂತ ಹಿಂದೂ ಕಾರ್ಯಕರ್ತರು
ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ
ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!