ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

Hubballi News: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು. ನೇಹಾ ತಂದೆ ನಿರಂಜನ‌ ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ಇವತ್ತು ರಾಜ್ಯಾಧ್ಯಕ್ಷರು ನೇಹಾ ಮನೆಗೆ ಬರ್ತೀದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳಿ ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ನೇಹಾ ಹಿರಮೇಠ ಅವರನ್ನು ಒಂದು ಜಾತಿಗೆ ಸಿಮೀತ ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡೋಕೆ ಆಗಿಲ್ಲ ಎಂದು ಬೊಮ್ಮಾಯಿ‌ ವಾಗ್ದಾಳಿ ನಡೆಸಿದ್ದಾರೆ.

ಕೆಪಿ ನಂಜುಡಿ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿದ ಬೊಮ್ಮಾಯಿ, ಅದು ಪರಿಣಾಮ ಬೀರಲ್ಲ ಕಾಂಗ್ರೆಸ್ ‌ನಲ್ಲಿದ್ರು ಬಿಜೆಪಿಗೆ ಬಂದಿದ್ರು. ಹೀಗಾಗಿ ರಾಜೀನಾಮೆ ಪರಿಣಾಮ ಬೀರಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..

ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.

About The Author