Political News: ಹುಬ್ಬಳ್ಳಿ: ಸಚಿವ ಸಂತೋಷ್ ಲಾಡ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಾಲಾಯಕ್ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ದಲಿತ ಸಮಾಜ ಹಾಗೂ ಮರಾಠ ಸಮಾಜ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಚೆನ್ನಮ್ಮ ವೃತ್ತದಿಂದ ತಹಶಿಲ್ದಾರ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ವಿಜಯೇಂದ್ರ ಭಾವಚಿತ್ರ ಮುರಿದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ವಿಜಯೇಂದ್ರ ವಿರುದ್ಧ ದಿಕ್ಕಾರ ಕೂಗಿ, ತೀವ್ರವಾಗಿ ರಾಜ್ಯದ ಜನತೆ ಮುಂದೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಳಿಕ ತಹಶಿಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮರಾಠ ಸಮೂದಾಯ, ದಲಿತ ಸಮೂದಾಯ ಮುಖಂಡರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ
ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..
ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.