ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಿಸಲು ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Political News: ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್‌ಡ್ರೈವ್ ಪ್ರಕರಣ ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಆರೋಪಗಳನ್ನು ಅರ್ಥಮಾಡಿಕೊಂಡ ನಮ್ಮ ಸರ್ಕಾರವು ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ತ್ವರಿತವಾಗಿ ರಚಿಸಿದೆ. ಆರೋಪಿ ತಲೆಮರೆಸಿಕೊಂಡಿದ್ದು, ದೇಶ ಬಿಟ್ಟು ಹೋಗಿದ್ದಾನೆ. ಈ ಕಾರಣಕ್ಕೆ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುತ್ತಿದ್ದು, ವಿದೇಶಾಂಗ ಸಚಿವ ಜೈಶಂಕರ್‌ ಅವರ ಮೂಲಕ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಿಸಲು ಮನವಿ ಮಾಡಿದ್ದೇನೆ. ಕಾನೂನಿನ ಸಂಪೂರ್ಣ ಬಲವನ್ನು ಎದುರಿಸಲು ಅವರ ತ್ವರಿತ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ನಾವು ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ಮತ್ತು ಪೊಲೀಸ್ ಚಾನೆಲ್‌ಗಳ ಮೂಲಕ ಮುಂದಿನ ಕ್ರಮವನ್ನು ಬಯಸುತ್ತೇವೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್

ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ: ಸಿಎಂ

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

About The Author