Political News: ಪ್ರಜ್ವಲ್ ರೇವಣ್ಣ ಕೇಸ್ನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರ ಹೆಸರನ್ನು ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ತಂದಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಜ್ವಲ್ ರೇವಣ್ಣ ಮಾಡಿರುವ ಕೆಲಸಕ್ಕೆ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರ ವಿರುದ್ಧ ಹಲವರು ವಾಗ್ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಕೋರ್ಟ್ ತಡೆಯಾಜ್ಞೆ ತಂದಿದ್ದು, ದೇವೇಗೌಡರು ಮತ್ತು ಕುಮಾರಸ್ವಾಮಿ ಹೆಸರನ್ನು ಪ್ರಜ್ವಲ್ ರೇವಣ್ಣ ಕೇಸ್ನಲ್ಲಿ ಬಳಸುವಂತಿಲ್ಲ.
ಪ್ರಜ್ವಲ್ ಕೇಸ್ಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಸಾರವಾಗುವಾಗಲೂ, ದೇವೇಗೌಡರ ಮತ್ತು ಕುಮಾರಸ್ವಾಮಿ ಹೆಸರು ಪ್ರಸಾರ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶಿಸಿದೆ. ದಾಖಲೆ ಇದ್ದಾಗ ಮಾತ್ರ ಇವರ ಹೆಸರನ್ನು ಬಳಸಲು ಅನುಮತಿ ನೀಡಲಾಗಿದೆ.
ವೀಡಿಯೋ ಸುದ್ದಿ ಪ್ರಸಾರವಾದಾಗ, ದೇವೇಗೌಡರ ಕುಟುಂಬವೆಂಬ ಹೆಸರು ತೆಗೆದುಕೊಂಡ ಕಾರಣಕ್ಕೆ, ಮುಜುಗರವಾದ ಕಾರಣ, ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ
ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ
ಶಿಕ್ಷಕಿ ಶಾಲೆಗೆ ಲೇಟಾಗಿ ಬಂದರೆಂದು ಹಲ್ಲೆ ಮಾಡಿ ಬಟ್ಟೆ ಹರಿದ ಪ್ರಾಂಶುಪಾಲರು