Dharwad News: ಧಾರವಾಡ : ರಾಜ್ಯದಲ್ಲಿ ತುರ್ತಾಗಿ ಬರ ಪರಿಹಾರ ಎಲ್ಲಾ ರೈತರಿಗೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿನ 223 ತಾಲೂಕುಗಳು ಬರಗಾಲದಿಂದ ದನ ಕರುಗಳಿಗೆ ನೀರು, ಮೇವು ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಿ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಳೆದ ವರ್ಷ ಸರಿಯಾಗಿ ಮಳೆಯಾಗಿಲ್ಲ, ರೈತರಿಗೆ ಮೇವು ಸಂಗ್ರಹ ಇಲ್ಲದೇ ದನ ಕರುಗಳನ್ನು ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಬರಗಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಯದೇ ಕೃಷಿ ಕಾರ್ಮಿಕರು ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರ ರೈತರಿಗೆ ಸಾಲ ಸೌಲಭ್ಯ ನೀಡಿ ಈಗ ಕಿರಿ ಕಿರಿ ಉಂಟು ಮಾಡುತ್ತಿದೆ. ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಾಲಮನ್ನಾ ಮಾಡಬೇಕು ಹಾಗೂ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಆಗ್ರಹಿಸಿದರು.
ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!
ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ