Wednesday, November 19, 2025

Latest Posts

ಇದು ಹೇಸಿಗೆ ಹುಟ್ಟಿಸುವಂಥ ಘಟನೆ, ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ: ಪ್ರಹ್ಲಾದ್ ಜೋಶಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂಥ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ. ಮನಸ್ಸಿಗೆ ಕಿರಿಕಿರಿ ಆಗುತ್ತಿದೆ. ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ತನಿಖೆಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜ್ಯದ ಕ್ಷಮೆ ಕೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟುಬಿಡೋಕೆ ಆಗುತ್ತದೆಯೇ..? ಯಾಕೆ ಕ್ಷಮೆ ಕೇಳಿದರು ಅಂತ ಪ್ರಜ್ವಲ್ ಉತ್ತರ ಕೊಡಲಿ.

ಅವರು ಕ್ಷಮೆ ಕೇಳುವುದಿದ್ದರೆ ಸಂತ್ರಸ್ಥರ ಕ್ಷಮೆ ಕೇಳಲಿ. ಪ್ರಜ್ವಲ್‌ಗೆ ಆಗುವ ಶಿಕ್ಷೆ ಆಗಲೇಬೇಕು. ಪೆನ್ ಡ್ರೈವ್ ಹಂಚಿಕೆ ಇತ್ಯಾದಿಗಳನ್ನು ನೋಡಿದಾಗ ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ ಎಂದು ಜೋಶಿ ಹೇಳಿದ್ದಾರೆ.

ಭವಾನಿ ರೇವಣ್ಣಗೆ ಬಿಗ್ ಶಾಕ್: ನೀರಿಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ

Prajwal Pen drive case: ಪ್ರಜ್ವಲ್ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಇಂಗ್ಲೀಷ್ ಟೀಚರ್ ಆಗಿ ಪಾಠ ಮಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು

- Advertisement -

Latest Posts

Don't Miss