Wednesday, November 19, 2025

Latest Posts

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೂ ಇದೆ: ಪ್ರಹ್ಲಾದ್ ಜೋಶಿ

- Advertisement -

Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಆದಿಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು, ಬಳಿಕ ಸಿಬಿಐ ತನಿಖೆಯ ಬಳಿಕ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳೋದ್ರಲ್ಲಿ, ದಾರಿ ತಪ್ಪಿಸುವಲ್ಲಿ ನಿಸ್ಸಿಂರು, ಇದೀಗ ವಾಲ್ಮೀಕಿ ಹಗರಣದಲ್ಲಿ ಯಾವುದೇ ಸಂಪರ್ಕವಿಲ್ಲದ 9 ಕಂಪನಿಗಳಿಗೆ ಹಣ ವರ್ಗಾವಣೆ ಆಗಿದೆ. ಇಷ್ಟಾದರೂ ಆರೋಪ ಹೊತ್ತಿರುವ ಸಚಿವನಿಂದ ರಾಜೀನಾಮೆ ಕೊಡಿಸಲು ಆಗುತ್ತಿಲ್ಲ ಎಂದು ಹರಿಹಾಯ್ದರು.

ಎಕ್ಸಿಟ್ ಪೋಲ್’ಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಚಂಡವಾದ ಬಹುಮತದೊಂದಿಗೆ ಜಯಸಾಧಿಸಲಿದೆ ಎನ್ನುವುದು ಬಂದಿದೆ.‌ ಚುನಾವಣೆ ಮೊದಲು, ನಂತರ, ಮಧ್ಯದಲ್ಲಿ ಬಿಜೆಪಿ ಪ್ರಚಂಡವಾದ ಬಹುಮತದೊಂದಿಗೆ ಮೋದಿ ನೇತೃತ್ವದಲ್ಲಿ ನಾವು ಜಯಗಳಿಸಲಿದ್ದೇವೆ ಎಂಬ ಮಾತನ್ನು ಹೇಳಿದ್ದೆ, ಅದೇ ತರಹ ಅಮಿತ್ ಶಾ, ರಾಜನಾಥಸಿಂಗ್ ಎಲ್ಲರೂ ಹೇಳಿದ್ರು, ಅದರ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ್ರು, ಇದೀಗ ಹೆಚ್ಚುಕಡಿಮೆ ಪಕ್ಷದ ನಾಯಕರ ಭವಿಷ್ಯಗಳು ಖಚಿತವಾಗಿವೆ. ಚುನಾವಣೆ ಫಲಿತಾಂಶ ಬಳಿಕ ಎಕ್ಸಿಟ್ ಪೋಲ್’ಕ್ಕಿಂತಲೂ ಬಿಜೆಪಿ 400 ಕ್ಕಿಂತ ಅಧಿಕ ಸೀಟ್’ಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೇಹಾ, ಅಂಜಲಿ ರೀತಿಯಲ್ಲಿ ಹತ್ಯೆ ಮಾಡಲಾಗುವುದು ಎಂದು ಶಿಕ್ಷಕಿ ದೀಪಾಗೆ ಬೆದರಿಕೆ ಪತ್ರ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಪೋಲಿಸರಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಜನಪ್ರತಿನಿಧಿಗಳು ಅಂದ್ರೆ ಪೋಲಿಸರಿಗೆ ಭಯವೇ ಇಲ್ಲದಾಗಿದೆ. ಸಿಎಂ ನಿದ್ದೆಯಿಂದ ಎಚ್ಚೆತ್ತುಕೊಳ್ಳಬೇಕು‌. ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಇಂತಹ ಘಟನೆಗಳು ನಡೆಯಲು ರಾಜ್ಯ ಸರ್ಕಾರದ ನಡುವಳಿಕೆಯೇ ಕಾರಣ ಎಂದು ದೂರಿದರು.

ಕಾಂಗ್ರೆಸ್’ನವರಿಗೆ ದೇಶದ ಚುನಾವಣೆ ಆಯೋಗ, ಸುಪ್ರೀಂ ಕೋರ್ಟ್, ಸಿಎಜಿ, ಯಾವುದೇ ರೀತಿಯಾದ ಸಂವಿಧಾನ ಆಧಾರದ ಮೇಲೆ ನಿರ್ಮಾಣ ಆದ ಸ್ವಾಯತ್ತ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ. ಜನತಾ ಜನಾರ್ಧನನ ಮೇಲೆ ವಿಶ್ವಾಸವಿಲ್ಲ. ಹೀಗಾಗಿ ಜನರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿಲ್ಲ ಎಂದು ಜೋಶಿ ಹೇಳಿದರು.

Bigg boss OTT 3: ಸಲ್ಮಾನ್ ಖಾನ್ ಜಾಗಕ್ಕೆ ಬಂದ ನಟ ಅನಿಲ್ ಕಪೂರ್

ಬಿಜೆಪಿಯವರು ನಮ್ಮನ್ನು ರಾಜಕೀಯ ಮಾಡಲು ಆಹ್ವಾನಿಸುತ್ತಿದ್ದಾರೆ ನಾವು ಮಾಡಿ ತೋರಿಸುತ್ತೇವೆ: ಡಿಕೆಶಿ

ಮಾನ್ಯ ಪ್ರಧಾನಿಯವರೇ, ಸಂಘದಲ್ಲಿ ಕಲಿತ ಪಾಠ ಬಿಟ್ಟು ವಾಸ್ತವಕ್ಕೆ ಕಣ್ತೆರೆಯಿರಿ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss