Hassan News: ಹಾಸನ: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಹಿನ್ನೆಲೆ ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಎದುರು ಪಟಾಕಿ ಸಿಡಿಸಿ, ನರೇಂದ್ರ ಮೋದಿ ಪರ ಘೋಷಣೆ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಇನ್ನೊಂದೆಡೆ ಕೇಂದ್ರ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ, ಪ್ರಮಾಣವಚನ ಸ್ವೀಕರಿಸಿದ್ದು, ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಭ್ರಮಾಚರಣೆಯಲ್ಲಿ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಮತ್ತು ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.
ಹಾಸನ ನಗರದ ಹೇಮಾವತಿ ಪ್ರತಿಮೆ ಎದುರು ಪಟಾಕಿ ಸಿಡಿಸಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದರು. ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಪರ ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗಿದರು.
ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

