International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ.
ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ ಕಟ್ಟದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಟ್ಟಡ ಮಲಯಾಳಿ ಉದ್ಯಮಿಗೆ ಸೇರಿದ್ದಾಗಿದ್ದು, ಇದರಲ್ಲಿ ಭಾರತೀಯ ಕಾರ್ಮಿಕರು ಕೂಡ ಇದ್ದರು. ಕಾರ್ಮಿಕರು ಕೆಲಸ ಮಡುತ್ತಿದ್ದ ವೇಳೆ, ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂಕಿ ತಗುಲಿದೆ.
ಮುಂಜಾನೆ ಈ ಘಟನೆ ನಡೆದಿದ್ದು, ಬೆಂಕಿಗೆ ಆಹುತಿಯಾಗಿದ್ದಲ್ಲದೇ, ನಿದ್ದೆಗಣ್ಣಿನಲ್ಲಿ ಹೊಗೆ ತೆಗೆದುಕೊಂಡ ಪರಿಣಾಮ, ಹಲವರು ಉಸಿರಿನ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ 40 ಜನ ಭಾರತೀಯರಾಗಿದ್ದು, ಇನ್ನೂ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಪ್ರಧಾನಿ ಮೋದಿ ಈ ಬಗ್ಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್
Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!