Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ ಪ್ರಾರಂಭದ ಬಗ್ಗೆ ಕೇವಲ 15 ದಿನದಲ್ಲಿ ಸವಿಸ್ತಾರವಾಗಿ ತಿಳಿಸುತ್ತೇನೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ನಮಗೆ ಅತಿ ಹೆಚ್ಚು ಲೀಡ್ ಕೊಟ್ಟ ಮತದಾರ ಪ್ರಭುಗಳಿಗೆ ಧನ್ಯವಾದ. ಇನ್ನು ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರವಾಸ ಮಾಡಿ ನಂತರ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಆದೇಶದಂತೆ ದೂರ ದೃಷ್ಟಿಯನ್ನು ಇಟ್ಟುಕೊಂಡು ಕ್ಷೇತ್ರದ ಅಭಿವೃದ್ಧಿಯತ್ತ ಚರ್ಚೆ ಮಾಡುತ್ತೇನೆ. ಈ ಭಾಗದ ಸಮಗ್ರ ಅಭಿವೃದ್ಧಿಯ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?