- Advertisement -
ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ನಡೆದಿದ್ದು, ಕೊಲ್ಹಾಪುರದಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಆಗಮಿಸಿದ್ದರು ಎಂದು ವರದಿಯಾಗಿದೆ. ಜೂ ನೋಡಿ ವಾಪಸ್ ಆಗುವ ವೇಳೆ ಹೆದ್ದಾರಿಯಲ್ಲಿ ಕಾಲೇಜು ಬಸ್ ಯು ಟರ್ನ್ ತೆಗೆದುಕೊಳ್ಳುವಾಗ ಟಿಪ್ಪರ್ ಡಿಕ್ಕಿಯಾಗಿದೆ. ಗಾಯಗೊಂಢಿರುವ ವಿದ್ಯಾರ್ಥಿಗಳನ್ನು ಬೆಳಗಾವಿಯ ಬಿಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -