ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ

Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ.

ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು, 2013 ರಿಂದ 2019ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು. ಇಂದು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ರೀತಿ ನಮಗೆ ಮಾದರಿಯಾಗಿದೆ. ಅವರ ಪತ್ನಿ, ಪುತ್ರ, ಕುಟುಂಬಸ್ಥರು, ಸಂಬಂಧಿಕರು, ಹಿತೈಷಿಗಳಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಜಗದೀಶ್ ಶೆಟ್ಟರ್ ಅವರು ಪ್ರಾರ್ಥಿಸಿದ್ದಾರೆ.

About The Author