ಶತಕ ಬಾರಿಸಿದ ಟೊಮೆಟೊ ಬೆಲೆ!

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈರುಳ್ಳಿ ಬೆಲೆ ಕಣ್ಣೀರು ತರಿಸುವಂತಿದೆ, ಕೆಂಪು ಸುಂದರಿ ಟೊಮೆಟೊ ಬೆಲೆ ಕೇಳಿ ಜನ ಶಾಕ್ ಆಗಿದ್ದಾರೆ. ಟೊಮೆಟೊ ದರ ದಾಖಲೆ ಪ್ರಮಾಣಕ್ಕೆ ಏರಿಕೆಯಾಗುತ್ತಿದ್ದು, ಈಗಾಗಲೇ ಶತಕ ದಾಟಿದೆ.

ಕಳೆದ ಬಾರಿಯೂ ಇದೇ ಸಮಯದಲ್ಲೇ ಟೊಮೆಟೊ ಬೆಲೆ ಸಾಕಷ್ಟು ಏರಿಕೆಯಾಗಿತ್ತು. ಇದೀಗ ಟೊಮೆಟೊ, ಈರುಳ್ಳಿ ಸೇರಿದಂತೆ ಎಲ್ಲಾ ತರಕಾರಿಗಳ ಬೆಲೆ ಏರಿಕೆಯಾಗಿದೆ. 40ರೂ. ಇದ್ದ ಟೊಮೆಟೊ ಬೆಲೆ 100ರೂ. ಆಗಿದ್ರೆ, ಈರುಳ್ಳಿ ಬೆಲೆ 30ರೂ.ನಿಂದ 60ರೂ.ಗೆ ಏರಿಕೆಯಾಗಿದೆ. ಬೆಳ್ಳುಳ್ಳಿ, ಕ್ಯಾರೆಟ್, ಬೀನ್ಸ್, ಕೋಸು, ಮೆಣಸು ಸೇರಿದಂತೆ ಎಲ್ಲಾ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ.
ಬೆಲೆ ಏರಿಕೆಗೆ ಹಲವು ಕಾರಣಗಳಿದ್ದು, ನೀರಿನ ಸಮಸ್ಯೆ ಮತ್ತು ಹಲವೆಡೆ ಅತೀಯಾದ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಯಾಗಿರುವುದೇ ಪ್ರಮುಖ ಕಾರಣವಾಗಿದೆ. ಬೆಳೆ ಹಾನಿಯಿಂದಾಗಿ ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲದಿರುವುದು, ಮದುವೆ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಂದ ಹೆಚ್ಚಿದ ಬೇಡಿಕೆಯಿಂದ ಮಾರುಕಟ್ಟೆಯಲ್ಲಿ ದರ ಏರಿಕೆಯಾಗಿದೆ. ಅದರಲ್ಲೂ ವಿಶೇಷವಾಗಿ ಟೊಮೆಟೊ ಬೆಲೆ ಹೆಚ್ಚಾಗಲು ಈ ಎಲ್ಲಾ ಕಾರಣಗಳ ಜೊತೆ ಟೊಮೆಟೊ ಬೆಳೆಗೆ ಆವರಿಸಿದ ರೋಗವು ಟೊಮೆಟೊ ಬೆಳೆಗಾರರಲ್ಲಿ ಆತಂಕವನ್ನು ಸೃಷ್ಟಿಮಾಡಿದ್ದರೆ, ಗ್ರಾಹಕರ ಕೈ ಸುಡುವಂತೆ ಮಾಡಿದೆ.

About The Author