- Advertisement -
ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ.
ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ ಹರಿಯಾಣದಲ್ಲಿ ಆರೋಪಿಗಳನ್ನು ಬಂಧಿಸಿರುವುದೇ ಸಾಕ್ಷಿ. ಬಿಜೆಪಿ ಆಡಳಿತವಿರುವ ಈ ರಾಜ್ಯಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ಕೇಂದ್ರವಾಗಿವೆ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -