ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ.
ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ ಬುಧವಾರವೇ ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಪವಿತ್ರಾ ಗೌಡ ಸೇರಿ 9 ಆರೋಪಿಗಳಿಗೆ ಡಿಎನ್ಎ ಪರೀಕ್ಷೆ ಮಾಡಲಾಗಿದೆ. ರಕ್ತ, ಕೂದಲಿನ ಮಾದರಿಯನ್ನು ಡಿಎನ್‌ಎ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಆರೋಪಿಗಳ ರಕ್ತ ಹಾಗೂ ಕೂದಲನ್ನು ಎಫ್ಎಸ್ಎಲ್‌ಗೆ ಕಳುಹಿಸಿ ತಾಳೆ ಮಾಡಲಾಗುತ್ತಿದೆ.
ದರ್ಶನ್ ಅರೆಸ್ಟ್ ಬಳಿಕ ಮೊದಲ ಬಾರಿಗೆ ಪತ್ನಿ ವಿಜಯಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಆಗಮಿಸಿದರು. ಪೊಲೀಸರ ನೋಟಿಸ್ ನೀಡಿದ ಹಿನ್ನೆಲೆ ವಿಜಯಲಕ್ಷ್ಮೀಯವರು ಠಾಣೆಗೆ ಬಂದಿದ್ದಾರೆ. ಕಪ್ಪು ಕಾರಿನಲ್ಲಿ ನೇರವಾಗಿ ಠಾಣೆಗೆ ಆಗಮಿಸಿದ್ದರು. ಎರಡು ಮೂರು ಗಂಟೆಗಳ ಕಾಲ ವಿಜಯಲಕ್ಷ್ಮಿ ಅವರು ವಿಚಾರಣೆ ಎದುರಿಸಿದರು ಎಂದು ಎನ್ನಲಾಗಿದೆ.
ನಟ ದರ್ಶನ್ ಪ್ರಕರಣದಲ್ಲಿ ಎಸ್‍ಪಿಪಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ದರ್ಶನ ಬಿಡುಗಡೆಗೊಳಿಸಲು ಕೆಲ ರಾಜಕಾರಣಿಗಳು ಕಸರತ್ತು ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ದರ್ಶನ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‍ಪಿಪಿ ಪ್ರಸನ್ನಕುಮಾರ್ ಅವರು ಖಡಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಈ ಬಗ್ಗೆ ಖುದ್ದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಎಸ್‍ಪಿಪಿ ಪ್ರಸನ್ನಕುಮಾರ್ ಬದಲಾವಣೆಯ ಪ್ರಸ್ತಾಪವೇ ಆಗಿಲ್ಲ. ಈ ಬಗ್ಗೆ ನನಗೇನು ಗೊತ್ತಿಲ್ಲ. ದರ್ಶನ್ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ. ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ-ಕಂತೆ ಸುದ್ದಿಗಳಿಗೆ ತೆರೆ ಎಳೆದರು.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್‍ಪಿಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರು ನಾನು ಕೇಳುವುದೂ ಇಲ್ಲಾ ಎಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು . ಕಾನೂನು ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಪೊಲೀಸ್ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯವನ್ನೂ ನೀಡಿದ್ದು ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್‍ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Darshan: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮೀ
- Advertisement -
- Advertisement -

