ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 7ನೇ ವೇತನ ಆಯೋಗ ಜಾರಿಗೆ ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರು ನಿರೀಕ್ಷಿಸಿದಂತೆ ಶೇ.27ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಲವು ತೋರಿದೆ ಎನ್ನಲಾಗಿದೆ.
ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ವೇತನ ಆಯೋಗದ ಶಿಫಾರಸುಗಳನ್ನು ಪೂರ್ಣಗೊಳಿಸುವ ಕುರಿತು ಮಾತನಾಡಿರುವ ಸಿಎಂ, 27%ರಷ್ಟು ವೇತನ ಹೆಚ್ಚಳ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಇದರೊಂದಿಗೆ 7ನೇ ವೇತನ ಆಯೋಗ ಜಾರಿಯಾಗಬೇಕೆಂಬ ಸರ್ಕಾರಿ ನೌಕರರ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.
ಆಯೋಗದ ವರದಿಯಲ್ಲಿ ಆರಂಭಿಕ ನೌಕರರ ಕನಿಷ್ಠ ವರದಿ 17 ಸಾವಿರ ಇದ್ದು, ಅದನ್ನು ಗರಿಷ್ಠ 27 ಸಾವಿರಕ್ಕೆ ಹಾಗೂ ಹಿರಿಯ ಶ್ರೇಣಿ ನೌಕರರ ಆರಂಭಿಕ ವೇತನ ಕನಿಷ್ಠ 1.04,600 ಇದ್ದು, ಅದನ್ನು 1,67,200ಕ್ಕೆ ಪರಿಷ್ಕರಿಸುವಂತೆ ಶಿಫಾರಸು ಮಾಡಿದೆ. 7ನೇ ವೇತನ ಆಯೋಗದ ಶಿಫಾರಸು ಅನುದಾನಿಕ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಅನ್ವಯವಾಗಲಿದೆ.