ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಕನ್ನಡಿಗ ಡೇವಿಡ್ ಜಾನ್ಸನ್ ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಕೊತ್ತನೂರಿನ ಎಸ್‌ಎಲ್‌ವಿ ಪ್ಯಾರಡೈಸ್ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಬಿದ್ದಿದ್ದಾರೆ.
ವೇಗದ-ಮಧ್ಯಮ ಬೌಲರ್ ಆಗಿ ಗುರುತಿಸಿಕೊಂಡಿದ್ದ 54 ವರ್ಷದ ಜಾನ್ಸನ್, ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದರು. 1996ರಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಿದ್ರು, 3 ವಿಕೆಟ್ಗಳನ್ನು ಪಡೆದಿದ್ದರು.
ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು. 1996ರಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸ ಮಾಡಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆ ಸರಣಿಯಲ್ಲಿ ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.




