ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರೊಂದಿಗೆ ದರ್ಶನ್ ಇಂದು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪ್ರಕರಣದ ಎ2 ಆರೋಪಿಯಾಗಿರುವ ದರ್ಶನ್, A9 ಧನರಾಜ್, A14 ಪ್ರದೂಷ್, A10 ವಿನಯ್ ಅವರನ್ನು ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಈ ಮೂಲಕ ದರ್ಶನ್ ಅವರು 13 ವರ್ಷಗಳ ಬಳಿಕ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು.
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಜೂನ್ 11ರಂದು ದರ್ಶನ್ ಬಂಧನವಾಗಿತ್ತು. ಮೂರು ಬಾರಿ ಅಂದರೆ 12 ದಿನಗಳ ಕಾಲ ದರ್ಶನ್‌ರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಕಸ್ಟಡಿಯಲ್ಲಿ ಎಲ್ಲ 17 ಆರೋಪಿಗಳ ವಿಚಾರಣೆ ಮಾಡಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ಆರೋಪಿಗಳ ಹೇಳಿಕೆ ದಾಖಲಿಸಿಕೊಂಡಿದ್ದರು. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ, ಸಾಕ್ಷ್ಯ ಸಂಗ್ರಹ ಮಾಡಿದ್ರು.



