ಬಿಆರ್​ಎಸ್​ಗೆ ಮತ್ತೊಂದು ಶಾಕ್- ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್​​ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ ಶ್ರೀನಿವಾಸ್ ರೆಡ್ಡಿ ಅವರು ಕಾಂಗ್ರೆಸ್ ಬಾವುಟ ಹಿಡಿದಿದ್ದರು.
ಇದಕ್ಕೂ ಮುನ್ನ ಬಿಆರ್‌ಎಸ್ ಶಾಸಕರಾದ ಕಡಿಯಂ ಶ್ರೀಹರಿ, ದಾನಂ ನಾಗೇಂದರ್ ಮತ್ತು ತಲ್ಲಂ ವೆಂಕಟ್ ರಾವ್ ಅವರು ರೇವಂತ್ ರೆಡ್ಡಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.

About The Author