ಹಾಲಿನ ದರ ಹೆಚ್ಚಳ- ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್​ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ ಎಂದು ಟೀಕಿಸಿದ್ದಾರೆ.

ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ. ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಹೊಸ ದರದ ಅನ್ವಯ ಅರ್ಧ ಲೀಟರ್ ಹಾಲಿನ ದರ 22ರಿಂದ 24 ರೂಪಾಯಿಗೆ ಹೆಚ್ಚಳವಾಗಿದೆ.

About The Author