ಸಿಎಂ ಭೇಟಿಯಾದ ರೇಣುಕಾಸ್ವಾಮಿ ತಂದೆ ತಾಯಿ

ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ತಂದೆ ತಾಯಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿಯಲ್ಲಿ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.ಅಷ್ಟೇ ಅಲ್ಲದೇ ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದು, ಇವರು ತಮ್ಮ ಸೊಸೆಗೆ ಅಂದರೆ ಮೃತ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.ಇವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದರು.
ಅಶ್ಲೀಲ ವಿಡಿಯೋ ಮತ್ತು ಮೇಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​ ಆ್ಯಂಡ್​ ಟೀಂ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿತ್ತು.. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇದುವರೆಗೂ 17 ಆರೋಪಿಗಳು ಜೈಲಿನಲ್ಲಿ ಇದ್ದಾರೆ.

About The Author