Friday, November 22, 2024

Latest Posts

Asaduddin Owaisi : ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಘೋಷಣೆ ; ಓವೈಸಿ ಘೋಷಣೆಗೆ ತೀವ್ರ ವಿರೋಧ..

- Advertisement -

ಸತತ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಸಂಸದರು ಹೊಸ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುನೂತನ ಸಂಸದರಿಗೆ ನಿನ್ನೆಯಿಂದ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲಿಗರಾಗಿದ್ದಾರೆ. ಈ ನಡುವೆ ಅಸಾದುದ್ದೀನ್ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಐದನೇ ಬಾರಿಗೆ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಓವೈಸಿ, ನಂತರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿದ್ದು. ಭಾರತದಲ್ಲಿ ಸಮಸ್ಯೆಗಳ ಅಂಚಿನಲ್ಲಿರುವವರ ಪರ ಪ್ರಾಮಾಣಿಕವಾಗಿ ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ಜೈ ಶ್ರೀರಾಮ್ ಘೋಷಣೆ ಕೂಗಲು ಆರಂಭಿಸಿದ್ದರು. ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ, ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದರು . ಆಗ ಅವರು ಅಲ್ಲಾ-ಓ-ಅಕ್ಬರ್ ಎಂಬ ಘೋಷಣೆಗಳನ್ನೂ ಕೂಗಿದರು. ಹಲವು ಬಿಜೆಪಿ ಸದಸ್ಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್, ಓವೈಸಿ ಆಕ್ಷೇಪಾರ್ಹವಾಗಿ ಏನಾದರೂ ಹೇಳಿದ್ದರೆ ಅದನ್ನು ಕಲಾಪದ ದಾಖಲೆಯಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದಾರೆ.

ಇನ್ನು ಓವೈಸಿ ಅವರ ಘೋಷಣೆಗೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನಾವು ಯಾವುದೇ ದೇಶವನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ, ಆದರೆ ಸದನದಲ್ಲಿ ಯಾವುದೇ ದೇಶದ ಹೆಸರನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -

Latest Posts

Don't Miss