ಭಾರತದೊಂದಿಗೆ ಯಾವಾಗಲೂ ಪಾಕ್ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಇಶಾಕ್ ದಾರ್ ಹೇಳಿದ್ದಾರೆ.
ಪಾಕಿಸ್ತಾನವು ನಿರಂತರವಾಗಿ ದ್ವೇಷ ಸಾಧನೆ ಮಾಡುವುದರಲ್ಲಿ ನಂಬಿಕೆ ಇಟ್ಟಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ ಆಧಾರದ ಮೇಲೆ ನಾವು ಭಾರತದೊಂದಿಗೆ ಉತ್ತಮ – ನೆರೆಹೊರೆ ಸಂಬಂಧವನ್ನು ಬಯಸುತ್ತೇವೆ ಎಂದು ಹೇಳಿದ್ದಾರೆ.
ಎಲ್ಲಾ ದೇಶಗಳೊಂದಿಗೆ ಶಾಂತಿಯುತ, ಸಹಕಾರಿ ಮತ್ತು ಉತ್ತಮ-ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪಾಕಿಸ್ತಾನ ಸತತವಾಗಿ ಶ್ರಮಿಸುತ್ತಿದೆ ಎಂದು ದಾರ್ ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ ಸವಾಲುಗಳು ಮತ್ತು ಹಿನ್ನಡೆಗಳ ಹೊರತಾಗಿಯೂ, ಪಾಕಿಸ್ತಾನದ ನಿರ್ಧಾರ ಸ್ಥಿರವಾಗಿರುತ್ತದೆ ಎಂದು ಹೇಳಿದರು.




