KODAGU: ಹೃದಯಾಘಾತಕ್ಕೆ ಯುವತಿ ಸಾ*ವು

ಕೊಡಗು: ಯುವತಿಯೊಬ್ಬಳು ಹೃದಯಾಘಾತದಿಂದ ‌ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.

ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಪುತ್ರ ನಿಲಿಕಾ ಪೊನ್ನಪ್ಪ (24) ಮೃತ ಯುವತಿಯಾಗಿದ್ದಾರೆ.

ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿಲಿಕಾ ಅವರು ಎಂದಿನಂತೆ ಕೆಲಸಕ್ಕೆ ಹೋಗಲು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಆದ್ರೆ, ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

About The Author