ಕರಾವಳಿ- ಮಲೆನಾಡಿನಲ್ಲಿ ಭಾರೀ ಮಳೆ: ಮುಳುಗಿದ ಕುಮಾರಧಾರ ಸ್ನಾನಘಟ್ಟ

ರಾಜ್ಯಾದ್ಯಂತ ಭಾರೀ ಮಳೆಯಾಗ್ತಿದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳೆಲ್ಲಾ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.. ಇನ್ನೂ ಹವಮಾನ ಇಲಾಖೆ ಜೂನ್​ 30ರ ವರೆಗೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.
ಕೊಡಗಿನಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗಿದೆ.. ಭಾರೀ ಮಳೆ ಹಿನ್ನೆಲೆ ವಿರಾಜಪೇಟೆ ಮತ್ತು ಪೊನ್ನಂಪೇಟೆ ಸೇರಿ ಮೂರು ತಾಲೂಕಿನ‌ ಶಾಲೆಗಳಿಗೆ ಇಂದು ರಜೆ‌ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಮಂಗಳೂರು ಗಡಿಭಾಗ ಕಾಸರಗೋಡಿನಲ್ಲೂ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಅಬ್ಬರಕ್ಕೆ ಮಂಗಳೂರಿನ ಇತಿಹಾಸ ಪ್ರಸಿದ್ಧ ಮಧೂರು ಸಿದ್ಧವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.
ಇನ್ನೂ ಮಳೆಯಿಂದಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.. ರೊಸಾರಿಯೋ ಶಾಲೆ ಬಳಿ ವಿದ್ಯುತ್ ಶಾಕ್​ ತಗುಲಿ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ರಾಜು ಮತ್ತು ದೇವರಾಜು ಮೃತ ಆಟೋ ಚಾಲಕರು. ಬೆಳಗ್ಗೆ ಆಟೋ ಸ್ವಚ್ಛ ಮಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿದ್ದ ಸಾವನ್ನಪ್ಪಿದ್ದಾರೆ.

About The Author