Hubli News: ಹುಬ್ಬಳ್ಳಿ: ಅದು ಅಂತರರಾಷ್ಟ್ರೀಯ ದರ್ಜೆಗೆ ಏರುತ್ತಿರುವ ವಿಮಾನ ನಿಲ್ದಾಣ. ಈ ನಿಲ್ದಾಣಕ್ಕೆ ಹಾಗೂ ಈ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್ ಬಂದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿಯೊಂದು ಚಲನವಲನಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಷ್ಟಕ್ಕೂ ಆತಂಕ ಸೃಷ್ಟಿಸಿದ ಮೇಲ್ ಯಾವುದು ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ..
ಈಗಾಗಲೇ ದೇಶದ ಬಹುತೇಕ ವಿಮಾನ ನಿಲ್ದಾಣಕ್ಕೆ ಮೇಲ್ ಮೂಲಕ ಬೆದರಿಕೆ ಬಂದಿರುವ ರೀತಿಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ನಿರ್ದೇಶಕರಿಗೂ ಬೆದರಿಕೆ ಮೇಲ್ ಬಂದಿದೆ. ಹೌದು..ಶೌಚಾಲಯದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಮೇಲ್ ಬಂದಿದೆ. ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರುವ ವಿಮಾನ ನಿಲ್ದಾಣದ ಅಧಿಕಾರಿಗಳು, ಪೊಲೀಸ್ ಆಯುಕ್ತರ ಗಮನಕ್ಕೂ ತಂದಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ವಿಮಾನ ನಿಲ್ದಾಣದ ಎಲ್ಲ ಕಡೆ ತಪಾಸಣೆ ಮಾಡಲಾಗಿದೆ. ಈ ಸಂಬಂಧ ಗೋಕುಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜನೆ ಮಾಡಲಾಗಿದೆ.
ಒಟ್ಟಿನಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿರುವ ಮೇಲ್ ಅನ್ನು ಮಾತ್ರ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದುಕೊಂಡಿರುವ ಆಡಳಿತ ಮಂಡಳಿ ಸಾಕಷ್ಟು ನಿಗಾವಹಿಸಿದೆ. ಅಲ್ಲದೆ ಹೈ ಅಲರ್ಟ್ ಘೋಷಣೆ ಮಾಡಿರುವ ಬೆನ್ನಲ್ಲೇ ಮತ್ತಷ್ಟು ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದು, ಎಲ್ಲ ಚಟುವಟಿಕೆಗಳ ಮೇಲೆಯೂ ಹದ್ದಿನ ಕಣ್ಣಿಡಲಾಗಿದೆ.
Bengaluru Airport : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ?: ತಮಿಳುನಾಡು ಮಹತ್ವದ ನಿರ್ಧಾರ

