ಹಾವೇರಿ: ಬ್ಯಾಡಗಿ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ13 ಮಂದಿ ಮೃತಪಟ್ಟಿದ್ದಾರೆ.
ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು, ಈ ಘಟನೆ ನಡೆದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್ (40), ನಾಗೇಶ್ (18) ಯಲ್ಲಪ್ಪ (65), ಗಣೇಶಪ್ಪ (65), ರಂಗನಾಥ ಸ್ವಾಮಿ (62) ಮತ್ತು ಇವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು, ಚಾಲಕ ನಾಗೇಶ್ (23), ಶರಣಪ್ಪ (24), ಪರಶುರಾ (40), ಮಂಜುಳಾ ರಾಮಕೃಷ್ಣ (50) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ. ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಸಂಭವಿಸಿದೆ.
13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ನಾಗೇಶ್ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ.
13 ಜನರ ಸಾವಿನ ಸುದ್ದಿ ಕೇಳಿ ಎಮ್ಮೆಹಟ್ಟಿ ಗ್ರಾಮದ ಜನತೆ ಶಾಕ್ ಆಗಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ವಿಶಾಲಾಕ್ಷಮ್ಮ, ಆದರ್ಶ್, ನಾಗೇಶ್, ಭಾಗ್ಯ, ಮಾನಸ, ಸುಭದ್ರತಾಯಿ ಮೂಲತಃ ಎಮ್ಮೆಹಟ್ಟಿ ಗ್ರಾಮದವರು. ಪರಶುರಾಮ್, ರೂಪ ದಂಪತಿಗಳು ಶಿವಮೊಗ್ಗ ನಗರದ ಹಾಲ್ಕೋಳ ನಿವಾಸಿಗಳು. ಮಂಜುಳಬಾಯಿ, ಮಂಜುಳ ಭದ್ರಾವತಿ ತಾಲೂಕಿನ ಕಲ್ಯಾಳ್ ಸರ್ಕಲ್‌ನವರು. ಅಂಜು ಕಡೂರು ತಾಲೂಕಿನ ಬೀರೂರು ನಿವಾಸಿ. ಪುಣ್ಯ ಬಾಯಿ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಹಾಲಿನ ಡೈರಿ ಗ್ರಾಮದ ನಿವಾಸಿಯಾಗಿದ್ದಾರೆ.
ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ಸಾ*ವು
- Advertisement -
- Advertisement -