Friday, April 18, 2025

Latest Posts

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಛಾವಣಿ ಕುಸಿತ

- Advertisement -

ನವದೆಹಲಿ: ಇಷ್ಟು ದಿನ ಬಿಸಿಲಿನಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಮಳೆಯಾಗಿದೆ. ಇಡೀ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು ಓರ್ವ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ.

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಕಿಂಗ್ ಘಟನೆ ಸಂಭವಿಸಿದೆ. ಇಲ್ಲಿ, ಟರ್ಮಿನಲ್ 1 ಹೊರಗೆ ಕಬ್ಬಿಣದ ಕಂಬಗಳನ್ನು ಅಳವಡಿಸಿ ಮಾಡಲಾಗಿದ್ದ ಛಾವಣಿಯು ಇದ್ದಕ್ಕಿದ್ದಂತೆ ಕುಸಿದಿದೆ. ಅಪಘಾತದಲ್ಲಿ, ಮೇಲ್ಛಾವಣಿಯನ್ನು ಬೆಂಬಲಿಸಲು ಬಳಸಲಾದ ಭಾರವಾದ ಕಬ್ಬಿಣವು ಟರ್ಮಿನಲ್ ಹೊರಗೆ ನಿಂತಿದ್ದ ಅನೇಕ ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಮೇಲೆ ಬಿದ್ದಿದೆ. ಕಾರು, ಮತ್ತು ಟ್ಯಾಕ್ಸಿಗಳು ಜಖಂ ಆಗಿವೆ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣವೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿವೆ..ಇನ್ನೂ ಈ ಭೀಕರ ಘಟನೆಯಲ್ಲಿ 6ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.. ಇನ್ನೂ ದೆಹಲಿ ಏರ್‌ಪೋರ್ಟ್‌ ಟರ್ಮಿನಲ್ 1ರ ಮೇಲ್ಛಾವಣಿಯಲ್ಲಿ ನೀರು ಧಾರಾಕಾರವಾಗಿ ಸೋರುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಯ ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ಟರ್ಮಿನಲ್‌ 1 ರಿಂದ ನಿಂದ ಎಲ್ಲಾ ನಿರ್ಗಮನವನ್ನು ಸ್ಥಗಿತಗೊಳಿಸಿದ್ದಾರೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಚೆಕ್-ಇನ್ ಕೌಂಟರ್‌ಗಳನ್ನು ಸಹ ಮುಚ್ಚಲಾಗಿದೆ. ಹೊಸ ಅಪ್ಡೇಟ್​ನಲ್ಲಿ, ಇಂಡಿಗೋ ವಿಮಾನಗಳ ಬಗ್ಗೆ ವಿಮಾನ ನಿಲ್ದಾಣವು ಮಾಹಿತಿ ನೀಡಿದೆ. ಇಂದು ಮಧ್ಯಾಹ್ನ 2 ಗಂಟೆಯವರೆಗೆ ಟರ್ಮಿನಲ್-1 ರಿಂದ ಹೊರಡುವ ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅದು ಹೇಳಿದೆ.

 

ಟರ್ಮಿನಲ್ ಒಂದಕ್ಕೆ ಬರುವ 12, ಹೊರಡುವ 16 ವಿಮಾನಗಳ ಸಂಚಾರ ಕ್ಯಾನ್ಸಲ್‌ ಮಾಡಲಾಗಿದೆ. ಟರ್ಮಿನಲ್ 2, 3ರಲ್ಲಿ ಎಂದಿನಂತೆ ವಿಮಾನಗಳ ಸಂಚಾರ ಮುಂದುವರಿದಿದೆ.
ಇನ್ನೂ ಇತ್ತೀಚೆಗಷ್ಟೇ ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ಅನ್ನು ನವೀಕರಣ ಮಾಡಲಾಗಿತ್ತು. ಕಳೆದ ಮಾರ್ಚ್‌ನಲ್ಲಿ ಏರ್‌ಪೋರ್ಟ್ ಟರ್ಮಿನಲ್ 1 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಮೂರೇ ತಿಂಗಳಿಗೆ ಮೇಲ್ಛಾವಣಿ ಕುಸಿದು ಬಿದ್ದಿದೆ.

ರಾಜಧಾನಿ ದೆಹಲಿಯಲ್ಲಿ ಮಳೆಯಿಂದಾಗಿಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೇ ದಿನದ ಮಳೆಗೆ ಇಡೀ ದೆಹಲಿ ಜಲಾವೃತವಾಗಿದೆ.

- Advertisement -

Latest Posts

Don't Miss