Sunday, April 20, 2025

Latest Posts

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

- Advertisement -

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿ ಧಾರವಾಡ ಜಿಲ್ಲೆಯಿಂದ ಹೊರಗಿರುವ ವಿನಯ್ ಅವರು, ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಮತದಾನ ಮಾಡುವ ಸಂಬಂಧ ಧಾರವಾಡಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ, ನ್ಯಾಯಾಲಯ ವಿನಯ್ ಅವರ ಈ ಅರ್ಜಿಯನ್ನೇ ವಜಾಗೊಳಿಸಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ವಿನಯ್ ಅವರು ಧಾರವಾಡ ಜಿಲ್ಲೆಯ ಪ್ರವೇಶ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

- Advertisement -

Latest Posts

Don't Miss