Bagalakote News: ಬಾಗಲಕೋಟೆ: ಬಾಗಲಕೋಟೆಯಲ್ಲಿ ಅಕ್ರಮ ಮಾವಾ ತಯಾರಿಸುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ಮಾಡಿದೆ.
ಜಮಖಂಡಿ ನಗರದ ಕುಂಬಾರ ಗಲ್ಲಿಯಲ್ಲಿ ಇರುವ ಮಾವಾ ತಯಾರಿಸುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ತಯಾರಿಕಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 105930/ ರೂಪಾಯಿ ಮೌಲ್ಯದ ಅಕ್ರಮ ಮಾವಾ ಹಾಗೂ ಅದಕ್ಕೆ ಸಂಬಂಧ ಪಟ್ಟ ಸಾಮಗ್ರಿಗಳನ್ನು, ಜಮಮಖಂಡಿ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮಖಂಡಿ ಶಹರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬಾಗಲಕೋಟೆಯ ಮಚಖಂಡಿ ತಾಂಡಾ ಬಳಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುಂಡಲೀಕ ಲಮಾಣಿ, ಕಮಲಾಬಾಯಿ ಚೌಹಾಣ್ ಕಳ್ಳಬಟ್ಟಿ ತಯಾರಿಸುತ್ತಿದ್ದ ವ್ಯಕ್ತಿಗಳಾಗಿದ್ದು, ಪೊಲೀಸರು ಕಳ್ಳಭಟ್ಟಿ ತಯಾರಿಕಾ ಸಾಮಗ್ರಿ ನಾಶಪಡಿಸಿದ್ದಾರೆ.
ಇಬ್ಬರ ಬಳಿ ೫೦ ಲೀ ನ ೬ ಕ್ಯಾನ್ ನ ಬೆಲ್ಲ ಮತ್ತು ರಸಾಯನ ನಾಶ ಮಾಡಿದ್ದು, ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




