ನಾವಿವತ್ತು ವೆಜಿಟೇಬಲ್ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳ್ತೀವಿ, ಅದಕ್ಕೆ ಬೇಕಾಗಿರುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ.

ಒಂದು ಬೀಟ್‌ರೂಟ್, ಒಂದು ಕ್ಯಾರೆಟ್, ಒಂದು ಆಲೂ, ಅರ್ಧ ಕ್ಯಾಪ್ಸಿಕಂ, ಒಂದು ನವಿಲುಕೋಸು, ಒಂದು ಈರುಳ್ಳಿ, ಬಟಾಣಿ. ಇದರೊಂದಿಗೆ ನಿಮಗೆ ಇಷ್ಟವಾದಲ್ಲಿ ಬೀನ್ಸ್, ಹೂಕೋಸು, ಎಲೆಕೋಸು ಬಳಸಿಕೊಳ್ಳಬಹುದು. ಒಂದು ಬೌಲ್ ನೆನೆಸಿಟ್ಟುಕೊಂಡ ಬಟಾಣಿ, ಕಡಲೆ, ಶೇಂಗಾಬೀಜ, ಹೆಸರು ಕಾಳಿನ ಮಿಶ್ರಣ. ಒಂದು ಕಪ್ ಕೊಬ್ಬರಿ ತುರಿ, ಸ್ವಲ್ಪ ಹುಣಸೆಹಣ್ಣು, 4-5 ಎಣ್ಣೆಯಲ್ಲಿ ಹುರಿದ ಒಣ ಮೆಣಸಿನಕಾಯಿ, ಚಿಕ್ಕ ತುಂಡು ಹಸಿ ಶುಂಠಿ, 2 ಸ್ಪೂನ್ ಜೀರಿಗೆ, 2 ಸ್ಪೂನ್ ಕೊತ್ತಂಬರಿ ಕಾಳು, 2 ಸ್ಪೂನ್ ಉದ್ದಿನ ಬೇಳೆ, ಅರ್ಧ ಕಪ್ ಬೆಲ್ಲ, ಚಿಟಿಕೆ ಅರಿಷಿನ, ಚಿಟಿಕೆ ಹೀಂಗೂ, ಒಗ್ಗರಣೆಗೆ 2 ಸ್ಪೂನ್ ಎಣ್ಣೆ, ಅರ್ಧ ಸ್ಪೂನ್ ಸಾಸಿವೆ, ಅರ್ಧ ಸ್ಪೂನ್ ಜೀರಿಗೆ, ಅರ್ಧ ಸ್ಪೂನ್ ಉದ್ದಿನ ಬೆಳೆ, 5ರಿಂದ 6 ಎಸಳು ಕರಿಬೇವು, ಖಾರ ಹೆಚ್ಚಿಗೆ ಬೇಕಾದಲ್ಲಿ ಹಸಿ ಮೆಣಸು ಅಥವಾ ಖಾರದ ಪುಡಿ ಬಳಸಬಹುದು, ರುಚಿಗೆ ತಕ್ಕಷ್ಟು ಉಪ್ಪು.
ಮೊದಲು ಬೀಟ್‌ರೂಟ್, ಕ್ಯಾರೆಟ್, ಆಲೂ, ನವಿಲುಕೋಸು, ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ ಕತ್ತರಿಸಿ ಉಪ್ಪು ನೀರಿನಲ್ಲಿ ಹಾಕಿ, ಪಕ್ಕಕ್ಕಿರಿಸಿ. ಈಗ ಮಿಕ್ಸಿ ಜಾರ್‌ಗೆ ಕೊಬ್ಬರಿ ತುರಿ, ಹುಣಸೆಹಣ್ಣು, ಎಣ್ಣೆಯಲ್ಲಿ ಹುರಿದ ಒಣ ಮೆಣಸಿನಕಾಯಿ, ಚಿಕ್ಕ ತುಂಡು ಹಸಿ ಶುಂಠಿ ಜಜ್ಜಿ ಹಾಕಿ ಒಮ್ಮೆ ರುಬ್ಬಿ. ಈಗ ಒಂದು ಪ್ಯಾನ್‌ಗೆ ಜೀರಿಗೆ, ಕೊತ್ತಂಬರಿ ಕಾಳು, ಉದ್ದಿನ ಬೇಳೆ ಹಾಕಿ, ಕಂದು ಬಣ್ಣಕ್ಕೆ ತಿರುಗಿ ಘಮ ಬರುವಷ್ಟು ಹುರಿದು, ರುಬ್ಬಿರುವ ಮಿಶ್ರಣಕ್ಕೆ ಸೇರಿಸಿ ಮತ್ತೊಮ್ಮೆ ರುಬ್ಬಿ. ಈಗ ಕರಿಗೆ ಬೇಕಾಗಿರುವ ಮಸಾಲೆ ರೆಡಿ.
ಬೀಟರೂಟ್, ನವಿಲುಕೋಸು ಅಷ್ಟು ಈಸಿಯಾಗಿ ಬೇಯೋದಿಲ್ಲ. ಹಾಗಾಗಿ ಕುಕ್ಕರಿನಲ್ಲಿ ಬೀಟರೂಟ್, ಕ್ಯಾರೆಟ್, ಆಲೂ, ನವಿಲುಕೋಸು, ಕಡಲೆ, ಬಟಾಣಿ, ಹೆಸರುಕಾಳು, ಹಾಕಿ 3 ವಿಶಲ್ ಕೂಗಿಸಿ, ಆರಲು ಬಿಡಿ.
ಈಗ ಪ್ಯಾನ್‌ಗೆ ಸ್ವಲ್ಪ ಎಣ್ಣೆ ಹಾಕಿ, ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಕರಿಬೇವು, ನೆನೆಸಿಟ್ಟುಕೊಂಡ ಶೇಂಗಾ ಈರುಳ್ಳಿ, ಕ್ಯಾಪ್ಸಿಕಂ, ಬಟಾಣಿ ಹಾಕಿ ಹುರಿಯಿರಿ. ಈಗ ಇದಕ್ಕೆ ಬೇಯಿಸಿಟ್ಟುಕೊಂಡ ತರಕಾರಿ, ಕಾಳಿನ ಮಿಶ್ರಣ ಹಾಕಿ 2 ರಿಂದ 3 ನಿಮಿಷ ಹುರಿಯಿರಿ. ರುಬ್ಬಿದ ಮಸಾಲೆ ಮಿಶ್ರಣದ ಜೊತೆ ಅಗತ್ಯವಿದ್ದಷ್ಟು ನೀರು, ಅರಿಷಿಣ, ಬೆಲ್ಲ, ಹೀಂಗೂ, ಉಪ್ಪು ಹಾಕಿ ಮಂದ ಉರಿಯಲ್ಲಿ 10ರಿಂದ 15 ನಿಮಿಷ ಬೇಯಿಸಿದರೆ ಮಿಕ್ಸ್ಡ್ ವೆಜಿಟೇಬಲ್ ಕರಿ ರೆಡಿ.
ಶ್ರಾವಣಿ ಸೋಮಯಾಜಿ, ಕರ್ನಾಟಕ ಟಿವಿ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




