- Advertisement -
ರಾಜ್ಯದಲ್ಲಿ ನಕಲಿ ಬಿಪಿಎಲ್ ಪತ್ತೆ ಹಚ್ಚಿ ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಅಲರ್ಟ್ ಆಗಿರುವ ಆಹಾರ ಇಲಾಖೆ, ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣವನ್ನು ಶೇ.5.67ಕ್ಕೆ ಇಳಿಸಲು ಮುಂದಾಗಿದೆ.
ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ತಮಿಳುನಾಡಿನಲ್ಲಿ ಶೇ.40ರಷ್ಟು ಬಿಪಿಎಲ್ ಕಾರ್ಡ್ಗಳಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಿಪಿಎಲ್ ಕಾರ್ಡ್ದಾರರ ಪ್ರಮಾಣ ಶೇ.5.67ರಷ್ಟು ಇರಬೇಕು ಎಂದು ಸಿಎಂ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಸುಮಾರು 1 ಕೋಟಿ ಬಿಪಿಎಲ್ ಕಾರ್ಡ್ಗಳು ರದ್ದಾಗುವ ಸಾಧ್ಯತೆಯಿದೆ. ಈ ಕುರಿತ ಸಂಪೂರ್ಣ ಮಾಹಿತಿ ಮೇಲಿನ ವಿಡಿಯೋದಲ್ಲಿದೆ.
- Advertisement -