- Advertisement -
Hassan News: ಹಾಸನ: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಗೆ ಆರೋಪದಡಿ, ಗ್ರೇಡ್ 1 ಕಾರ್ಯದರ್ಶಿ ಎನ್.ಎಂ.ಜಗದೀಶ್ ಅವರ ನಿವಾಸ ಹಾಗೂ ಬೆಂಗಳೂರಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಲೋಕಾಯುಕ್ತ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಎನ್.ಎಂ.ಜಗದೀಶ್ ಬೇಲೂರು ತಾಲ್ಲೂಕು, ಅರೇಹಳ್ಳಿ ಹೋಬಳಿ, ವಾಟಿಹಳ್ಳಿ ಗ್ರಾಮದವರಾದ ಎನ್.ಎಂ.ಜಗದೀಶ್, ಬೆಂಗಳೂರು ಉತ್ತರ, ದಾಸನಪುರ ಗ್ರಾಮ ಪಂಚಾಯತಿಯಲ್ಲಿ
ಗ್ರೇಡ್ 1 ಕಾರ್ಯದರ್ಶಿ ಆಗಿದ್ದಾರೆ.
ಎಸ್.ಪಿ.ಮಲ್ಲಿಕ್ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ತಿರುಮಲಮೇಶ್, ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ಹಾಗೂ ಚಿಕ್ಕಮಗಳೂರಿನ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ.
- Advertisement -