Dharwad News: ಧಾರವಾಡ: ಧಾರವಾಡದಲ್ಲಿ ಮನುಷ್ಯರಂತೆ, ಕೋತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ಸಾಯುವ ಕೋತಿಗಳನ್ನು ಕಾರ್ಪೋರೇಷನ್‌ಗೆ ಹೇಳಿ, ಎತ್ತಿ ಹಾಕಿಸೋದು, ಅಥವಾ ತೆಗೆದುಕೊಂಡು ಹೋಗಿ ಎಲ್ಲಾದರೂ ಬಿಸಾಕಿ ಬರುವವರಿದ್ದಾರೆ.
ಆದರೆ ಧಾರವಾಡದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ವಿದ್ಯುತ್ ಸ್ಪರ್ಶಿಸಿ, ಕೋತಿಯೊಂದು ಸಾವನ್ನಪ್ಪಿದ್ದು, ಗ್ರಾಮಸ್ಥರೆಲ್ಲ ಸೇರಿ, ಆ ಕೋತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಮನುಷ್ಯರನ್ನು ಯಾವ ರೀತಿಯಾಗಿ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ಮಾಡುತ್ತಾರೋ, ಅದೇ ರೀತಿ ಅಂತ್ಯಸಂಸ್ಕಾರ ಮಾಡಲಾಗಿದೆ.
ಅದಕ್ಕೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡುವ ಮೂಲಕ, ಅಂತಿಮ ವಿದಾಯ ಹೇಳಲಾಗಿದೆ. ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲೇ ಅಂತ್ಯಸಂಸ್ಕಾರ ಮಾಡಿ, ಅಲ್ಲೇ ಮಂದಿರ ನಿರ್ಮಾಣ ಮಾಡಲಾಗುತ್ತದೆ. ಗ್ರಾಮಸ್ಥರು ಈಗಾಗಲೇ ಮಂದಿರ ನಿರ್ಮಾಣ ಕಾರ್ಯವನ್ನೂ ಆರಂಭಿಸಿದ್ದಾರೆ.

