ಎಸ್.ಜಾನಕಿ, ಕನ್ನಡ ಚಿತ್ರರಂಗ ಕಂಡ ಕಂಚಿನಕಂಠದ ಗಾಯಕಿ. 90ರ ದಶಕದ ಸಿನಿಮಾಗಳಿಂದ ಹಿಡಿದು ಹೊಸ ಸಿನಿಮಾದ ಹಾಡುಗಳಿಗೂ ಕಂಠದಾನ ಮಾಡಿದ ಗಾನಕೋಗಿಲೆ.ಇಂಥ ಗಾನ ಕೋಗಿಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ಪ್ರಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ, ಅಸಮಾಧಾನ ಹೊರಹಾಕಿದ್ದಾರೆ.
ಗಾಯಕಿ ಎಸ್.ಜಾನಕಿಯವರು ಸಾವನ್ನಪ್ಪಿದ್ದಾರೆಂದು ಸೋಶಿಯಲ್ ಮೀಡಿಯಾದಲ್ಲಿ ಪುಂಡ ಪೋಕರಿಗಳು ಸುಳ್ಳುಸುದ್ದಿ ಹಬ್ಬಿಸುತ್ತಿದ್ದು, ಈ ಬಗ್ಗೆ ನಿನ್ನೆ ಫೇಸ್‌ಬುಕ್‌ನಲ್ಲಿ ವೀಡಿಯೋ ಶೇರ್ ಮಾಡಿರುವ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ, ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಎಸ್.ಪಿ.ಬಾಲಸುಬ್ರಮಣ್ಯಂ, ಬೆಳಿಗ್ಗೆಯಿಂದ ನನಗೆ 20ಕ್ಕೂ ಹೆಚ್ಚು ಕರೆ ಬಂದಿದ್ದು, ಅವರೆಲ್ಲರೂ ಜಾನಕಿಯಮ್ಮನವರ ಬಗ್ಗೆ ಕೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಲವರು ಜಾನಕಿಯಮ್ಮನವರು ಇನ್ನಿಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಏನಿದು ಮೂರ್ಖತನ..? ಎಂದು ಪ್ರಶ್ನಿಸಿದ್ದಾರೆ. ನಾನು ಜಾನಕಿಯಮ್ಮನವರೊಂದಿಗೆ ಮಾತನಾಡಿದ್ದೇನೆ. ಅವರು ಆರೋಗ್ಯವಾಗಿದ್ದಾರೆ ಎಂದು ಎಸ್‌ಪಿಬಿ ಸ್ಪಷ್ಟನೆ ನೀಡಿದ್ದಾರೆ.
ಅಲ್ಲದೇ, ಕೆಲ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಸೆಲೆಬ್ರಿಟಿಗಳ ಸಾವಿನ ಸುದ್ದಿ ಕೇಳಿ ಹಾರ್ಟ್‌ಅಟ್ಯಾಕ್ ಆಗಬಹುದು.ಅದಕ್ಕಾಗಿ ಸಾಮಾಜಿಕ ಜಾಲತಾಣವನ್ನು ಒಳ್ಳೆಯದಕ್ಕಾಗಿ ಬಳಸಿಕೊಳ್ಳಿ. ಇಂತಹ ವಿಷಯಗಳನ್ನ ತಮಾಷೆಯಾಗಿ ತೆಗೆದುಕೊಳ್ಳಬೇಡಿ. ಇಂಥ ಕೆಲಸಕ್ಕಾಗಿ ಸಾಮಾಜಿಕ ಜಾಲತಾಣವನ್ನ ಬಳಸಬೇಡಿ. ಜಾನಕಿಯಮ್ಮನವರು ಇನ್ನೂ ನೂರ್ಕಾಲ ಚೆನ್ನಾಗಿ ಬಾಳಲಿ, ಆಕೆ ಸೇಫ್ ಆಗಿ, ಆರೋಗ್ಯವಾಗಿದ್ದಾರೆ. ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದಿದ್ದಾರೆ.
ಇತ್ತೀಚಿನ ಕೆಲ ದಿನಗಳಲ್ಲಿ ಕಿಡಿಗೇಡಿಗಳು ಸೆಲೆಬ್ರಿಟಿಗಳ ಬಗ್ಗೆ ಸುಳ್ಳು ವದಂತಿಗಳನ್ನ ಹಬ್ಬಿಸುವುದು ಹೆಚ್ಚಾಗಿದೆ. ಮೊನ್ನೆ ಮೊನ್ನೆ ತಾನೇ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಕೊರೊನಾ ತಗುಲಿದೆ ಎಂಬ ಸುದ್ದಿ ಹರಡಿಸಿದ್ದರು. ಅಲ್ಲದೇ, ಸೆಲೆಬ್ರಿಟಿಗಳ ಸೋಶಿಯಲ್ ಮೀಡಿಯಾಗಳನ್ನ ಕಿಡಿಗೇಡಿಗಳು ಹ್ಯಾಕ್ ಮಾಡಲು ಶುರುಮಾಡಿದ್ದು, ಈ ಬಗ್ಗೆ ಸೆಲೆಬ್ರಿಟಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.