Saturday, October 19, 2024

Latest Posts

ರಾತ್ರೋರಾತ್ರಿ ರೌಡಿಶೀಟರ್‌ಗಳನ್ನು ಠಾಣೆಗೆ ಕರೆತಂದು ಖಡಕ್ ವಾರ್ನಿಂಗ್ ಕೊಟ್ಟ ಕಮೀಷನರ್

- Advertisement -

Dharwad News: ಧಾರವಾಡ: ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಶೀಟರ್‌ಗಳು, ಇತರ ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ ಪುಡಾರಿಗಳನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಶನಿವಾರ ರಾತ್ರಿ ಧಾರವಾಡ ಪೊಲೀಸ್ ಠಾಣೆಗೆ ಕರೆಯಿಸಿ ಖಡಕ್ ವಾರ್ನಿಂಗ್ ಕೊಡುವ ಮೂಲಕ ಕೆಲವರ ಮೇಲೆ ಪ್ರಕರಣ ಕೂಡ ದಾಖಲಿಸಿದ್ದಾರೆ.

ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಂಡ ಪೊಲೀಸರು 50 ಜನ ರೌಡಿಶೀಟರ್‌ಗಳು 36 ಎಂಓಬಿಗಳು, 9 ಜನ ಎನ್‌ಡಿಪಿಎಸ್ ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ 61 ಜನ, ಇತರೆ 18 ಜನ ಆರೋಪಿಗಳು ಸೇರಿದಂತೆ 170 ಜನರನ್ನು ಠಾಣೆಗೆ ಕರೆ ತಂದು ಕೆಪಿ ಆ್ಯಕ್ಟ್ ಅಡಿ ದೂರು ದಾಖಲಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯ ಸೇವಿಸಿ ಜನರಿಗೆ ತೊಂದರೆ ಕೊಡುತ್ತಿದ್ದ 31 ಜನರ ವಿರುದ್ಧ ಕೋಪ್ಟಾ ಆ್ಯಕ್ಟ್ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ 38 ಜನರ ವಿರುದ್ಧ ಎಂವಿ ಆ್ಯಕ್ಟ್ ಅಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ಒಟ್ಟು 243 ಜನರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರಿಗೆ ಕಮೀಷನರ್ ಎನ್.ಶಶಿಕುಮಾರ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಹುಬ್ಬಳ್ಳಿ, ಧಾರವಾಡ ಅವಳಿನಗರದ ಒಂದೊಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿದಿನ ಈ ಪೊಲೀಸ್ ಏರಿಯಾ ಡಾಮಿನೇಷನ್ ಕಾರ್ಯ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ. ನಮ್ಮ ಪೊಲೀಸ್ ಸಿಬ್ಬಂದಿ ಮಫ್ತಿಯಲ್ಲಿ ತಿರುಗಿ ಸಾರ್ವಜನಿಕರಿಗೆ ತೊಂದರೆ ಕೊಡುವ ಪುಡಾರಿಗಳು, ರೌಡಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದು, ನೂತನ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Latest Posts

Don't Miss