Thursday, August 21, 2025

Latest Posts

2 ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆ ಆತ್ಮಹ*ತ್ಯೆಗೆ ಯತ್ನಿಸಿದ ತಂದೆ

- Advertisement -

Hassan News: ಮಗುವಿನ ಅನಾರೋಗ್ಯದಿಂದ ಮನನೊಂದು ತಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ವ್ಯಕ್ತಿ ಯತ್ನಿಸಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿಯಿಂದ ಆತ್ಮಹತ್ಯೆ ಯತ್ನ ನಡೆದಿದ್ದು, ಕಟ್ಟಡದ 5ನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.

ತನ್ನ ಎರಡು ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಗಂಗಸ್ವಾಮಿ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದ. ಆದರೆ ಮಗುವಿನ ಆರೋಗ್ಯ ಬಿಗಡಾಯಿಸುತ್ತ ಹೋಗುತ್ತಿರುವ ಹಿನ್ನೆಲೆ, ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದ್ದು, ಗಂಗಸ್ವಾಮಿಯ ಮನವೊಲಿಸಿ, ಕೆಳಗಿಳಿಸಲಾಗಿದೆ. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

- Advertisement -

Latest Posts

Don't Miss