- Advertisement -
Hassan News: ಹಾಸನ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ಪೆಟ್ಟಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಏಕಾದಶಿ ಪ್ರಯುಕ್ತ ರೇವಣ್ಣ ಉಪವಾಸವಿದ್ದರು.
ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಳಿಕ ಅಲ್ಲಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು, ಈ ವೇಳೆ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ. ಉಪವಾಸವಿದ್ದ ಕಾರಣ, ದೇಹದಲ್ಲಿ ಅಶಕ್ತತೆ ಇದ್ದು, ಬಿದ್ದಿರುವ ಕಾರಣ ಪಕ್ಕೆಲುಬಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ಹೊಳೆನರಸೀಪುರ ತಾಲೂಕು ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
- Advertisement -