Friday, July 4, 2025

Latest Posts

ನಾನು ಕರ್ನಾಟಕಕ್ಕೆ ಬರ್ತಿನಿ ಎಂದರೆ ಅವರಿಗೆ ಕೈಕಾಲು ನಡುಗುತ್ತೆ: ಕುಮಾರಸ್ವಾಮಿ ಟಾಂಗ್‌

- Advertisement -

Hassan News: ಹಾಸನ : ಯಾವ ಸರ್ಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಹೇಳಿಕೆಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇಂದು ಹಾಸನದ ಸಕಲೇಶಪುರ ತಾಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ,  ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿದ್ದೇವೆ. ಒಂದು ಲಕ್ಷ ಪರಿಹಾರ ಕೊಟ್ಟಿದ್ದೇವೆ, ಐವತ್ತು ಸಾವಿರ ಪದಾರ್ಥ ಕೊಳ್ಳಲು ಕೊಟ್ಟಿದ್ದೇವೆ. ಗೊತ್ತಿಲ್ಲದೆ ಹೋದರೆ ಹೋಗಿ ನೋಡಿಕೊಂಡು ಬರಲಿ.

ನಾನು, ಅಶೋಕ್ ಒಟ್ಟಿಗೆ ಬಂದಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದ್ದಾರೆ. ನಿನ್ನೆ ಐದು ಕಿಲೋಮೀಟರ್ ಹಿಂದೆ ತಡೆಗೋಡೆ ಇಟ್ಟು ಏನು ಚಿತ್ರೀಕರಣ ಮಾಡದ ರೀತಿ ಆದೇಶ ಮಾಡಿದ್ದರು. ನಾನು ಯಾರನ್ನು ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪಾಪ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ, ಮಿಲಿಟರಿ ತರಬೇಕು ಎಂದು. ಅವರು ಮಿಲಿಟರಿ ಏಕೆ ತರಲು ಹೇಳಿದ್ದಾರೆ ಎಂದರೆ ಈ ರಾಜ್ಯದಲ್ಲಿ ದರೋಡೆ ನಡೆಯುತ್ತಿದೆ. ಟೆರರಿಸ್ಟ್ ಆ್ಯಕ್ಟಿವಿಟಿಗಿಂತಲೂ ದರೋಡೆ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿ ಕರೆ ತರಲು ಹೇಳಿದ್ದಾರೆ. ನನ್ನನ್ನು ನೋಡಿದರೆ ಡಿಪ್ರೆಷನ್‌ನಲ್ಲಿ‌ ಇರುವವನ ತರ ಕಾಣುತ್ತೇನಾ..? ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮಿಲಿಟರಿ ತರಲು ಏಕೆ ಹೇಳಿದ್ರು ಅಂತ ನಾನು ಯೋಚನೆ ಮಾಡುತ್ತಿದ್ದೇನೆ. ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡ್ತಾರೆ. ನಾನು ಬರಲೇಬಾರದು ಎನ್ನುವ ರೀತಿ ಹೇಳಿಕೆ ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಮಂಡ್ಯಗೆ ಹೋದರು ಬೇಡ ಅಂತಾರೆ, ಉತ್ತರ ಕರ್ನಾಟಕ ಹೋಗ್ತಿನಿ ಅಂದರೆ ಅಲ್ಲಿಗೂ ಬೇಡ ಅಂತಾರೆ. ಸದ್ಯ ಹಾಸನಕ್ಕೆ ಬರಬೇಡಿ ಅನ್ನಲಿಲ್ಲ. ನಾನು ಕರ್ನಾಟಕಕ್ಕೆ ಬರ್ತಿನಿ ಎಂದರೆ ಅವರಿಗೆ ಕೈಕಾಲು ನಡುಗುತ್ತೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

Latest Posts

Don't Miss