Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.
ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹೊರ ಹರಿವಾಗಿದ್ದು, ಜಮಖಂಡಿ ತಾಲ್ಲೂಕಿನ ಮುತ್ತೂರ, ಮೈಗೂರ, ಕಂಕನವಾಡಿ ನಡುಗಡ್ಡೆ ಜಲಾವೃತವಾಗಿದೆ.
ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮಹಾಮಳೆ ನಿಲ್ಲದ ಕಾರಣ, ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.




