ಇನ್ಸ್‌ಪೆಕ್ಟರ್ ಕೆ.ಎಸ್.ಹಟ್ಟಿ ನೇತೃತ್ವದಲ್ಲಿ ಚಿನ್ನಗಳ್ಳತನದ A3 ಆರೋಪಿ ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪುರದಲ್ಲಿನ ಜ್ಯುವೇಲರಿ ಶಾಪ್’ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಈಗಾಗಲೇ ಜ್ಯುವೇಲರಿ ಶಾಪ್’ನಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ A2 ಆರೋಪಿಯಾಗಿರುವ ಪರ್ಹಾನ್ ಶೇಕ್ ಎಂಬಾತನನ್ನು ಬಂಧಿಸಿದ್ದಾರೆ. ಇದೀಗ ಇನ್ಸ್ಪೆಕ್ಟರ್ ಕೆ.ಎಸ್ ಹಟ್ಟಿ ನೇತೃತ್ವದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಉತ್ತರ ಪ್ರದೇಶದ ಮೂಲದ A3 ಆರೋಪಿ ಮುಖೇಶ್ ಯಾದವ ಎಂಬಾತನನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

ಇನ್ನೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆರೋಪಿಗಳ ಬಂಧನಕ್ಕೆ ವಿಶೇಷ ತಂಡವನ್ನು ರಚನೆ ಮಾಡಿದ್ದರು.

ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರ ಆರೋಪಿಗಳಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೋರ್ವ ಪ್ರಮುಖ ಆರೋಪಿ ಪತ್ತಗೆ ಪೋಲಿಸರು ಬಲೆ ಬಿಸಿದ್ದಾರೆ. ಪೊಲೀಸರ‌ ಕಾರ್ಯವೈಖರಿ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಹುಬ್ಬಳ್ಳಿ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

About The Author