Wednesday, January 15, 2025

Latest Posts

Tumakuru News: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವು

- Advertisement -

Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.

ತುಮಕೂರು ನಗರದ ಚೆತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿಯಾಗಿದ್ದು, ಬಟವಾಡಿ ಕಡೆಯಿಂದ ಮಹಾತ್ಮಾಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದ.

ಈ ವೇಳೆ ಬಸ್ ಡಿಕ್ಕಿಯಾಗಿ ಬಸ್‌ನಡಿ ಸಿಲುಕಿ, ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದ. ಗಾಯಗೊಂಡಿದ್ದ ಚಂದ್ರಶೇಖರ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಬಳಿಕ, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿಯೇ ಚಂದ್ರಶೇಖರ್ ಕೊನೆಯುಸಿರೆಳೆದಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Latest Posts

Don't Miss