ಸವದತ್ತಿ ರೈಲ್ವೆ ಸಂಪರ್ಕಕ್ಕಾಗಿ ಸರ್ವೇ ನಡೆಸಿ: ಸಂಸದ ಜಗದೀಶ್ ಶೆಟ್ಟರ್ ಮನವಿ

Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.

ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಆದರೆ ಎಲ್ಲಮ್ಮನ ಗುಡ್ಡಕ್ಕೆ ರಸ್ತೆ ಸಂಪರ್ಕ ಮಾತ್ರ ಲಾಭವಿದೆ ದೇವಸ್ಥಾನಕ್ಕೆ ಸಂಪರ್ಕ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನಗಳ ದಟ್ಟಣೆ ಹೆಚ್ಚುತ್ತಿದ್ದು ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಅಗತ್ಯವಿದೆ ಹೀಗಾಗಿ ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಸರ್ವೇ ಕೈಗೊಳ್ಳುವಂತೆ ಹುಬ್ಬಳ್ಳಿ ನೇರ ಪ್ರಬಂಧಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಇನ್ನು 2016ರಲ್ಲಿ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಹುಬ್ಬಳ್ಳಿ ನಿಲ್ದಾಣದಲ್ಲಿ ರೈಲ್ವೆ ತಡೆದ ನೂರಾರು ರೈತರ ಮೇಲೆ ಪೊಲೀಸರು ದಾಖಲಿಸಿದ ಪ್ರಕರಣಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.  ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಇದ್ದರು.

About The Author