Monday, November 17, 2025

Latest Posts

KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು?: ಹೆಚ್.ಡಿ.ಕುಮಾರಸ್ವಾಮಿ

- Advertisement -

Political News: ಕೆಪಿಎಸ್‌ಸಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್ ಸರಕಾರ ಹಾಗೂ #KPSC ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

- Advertisement -

Latest Posts

Don't Miss