Friday, July 4, 2025

Latest Posts

ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ; ರಾಜೀನಾಮೆ ಕೊಡಲ್ಲ- ಸಿಎಂ ಸಿದ್ದರಾಮಯ್ಯ

- Advertisement -

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು.


ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ದೂರು ದಿನವೇ ನನಗೆ ಶೋಕಾಸ್ ನೋಟಿಸ್ ನೀಡಿದ್ರು. ರಾಜಭವನವನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ರಾಜೀನಾಮೆ ನೀಡುವ ತಪ್ಪು ನಾನು ಮಾಡಿಲ್ಲ. ಹೆಚ್​.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ್ ರೆಡ್ಡಿ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ರಾಜ್ಯಪಾಲರು ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿಲ್ಲ ಅಂತ ಸಿದ್ದರಾಮಯ್ಯಪ್ರಶ್ನಿಸಿದ್ದಾರೆ.


ದೊಡ್ಡ ಷಡ್ಯಂತ್ರದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಚುನಾಯಿತ ಸರ್ಕಾರದ ಅಭದ್ರಗೊಳಿಸಲು ಷಡ್ಯಂತ್ರ ನಡೀತಿದೆ. ಇದು ಕಾನೂನು ಹಾಗೂ ಸಂವಿಧಾನಕ್ಕೆ ವಿರುದ್ಧವಾದದ್ದು. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್, ಎಲ್ಲಾ ಸಚಿವರು, 136 ಶಾಸಕರು ನನ್ನ ಪರವಾಗಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

- Advertisement -

Latest Posts

Don't Miss