Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನಲೆ, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ಸಿಗರು, ವೇಸ್ಟ್ ಪೇಪರ್ ತಂದು ಬೆಂಕಿ ಹಚ್ಚಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೊನ್ನರೆಡ್ಡಿ, ಅಪ್ಪಾಜಿಗೌಡ ಸಿ ಎಸ್ ನಾಡಗೌಡರ ನೇತೃತ್ವದಲ್ಲಿ ಪ್ರೊಟೆಸ್ಟ್ ನಡೆದಿದ್ದು, ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಹಾದಿ ಬಿದಿಯಲ್ಲಿ ಹೋಗುವವನ ಅರ್ಜಿಗೆ ರಾಜ್ಯಪಾಲರು ಮಾನ್ಯತೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೆಡುವ ಹುನ್ನಾರ ಕೇಂದ್ರ ಬಿಜೆಪಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯವರು ಹೆದರುವ ವ್ಯಕ್ತಿಯಲ್ಲ. ಇದನ್ನು ಕಾನೂನು ಚೌಕಟ್ಟಿನಲ್ಲಿಯೇ ಎದುರಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಬಿಜೆಪಿಯವರ ಈ ರೀತಿ ಕುತಂತ್ರಕ್ಕೆ ನಾವ್ಯಾರು ಹೆದರುವುದಿಲ್ಲ. ಜನಾರ್ಶೀವಾದವಿರು ಸರ್ಕಾರ ಅಸ್ಥರಿಗೊಳ್ಳಿಸುವ ಬಿಜೆಪಿ ಯತ್ನ ಸಫಲವಾಗುವುದಿಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಎಂದಿದ್ದಾರೆ.
ಅಲ್ಲದೇ, ಈ ರೀತಿ ಕುತಂತ್ರ ಕೆಲಸವನ್ನು ಕೇಂದ್ರ ರಾಜ್ಯ ಬಿಜೆಪಿ ನಾಯಕರು ಬಿಡಬೇಕು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಜನಪ್ರಿಯತೆ ಸಹಿಸದೇ ಬಿಜೆಪಿ ಹಿಂಬಾಗಿಲಿನಿಂದ ಸರ್ಕಾರ ಕೇಡವಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದು, ಈ ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಅಗ್ರಹಿಸಿದ್ದಾರೆ. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡುವುದಾಗಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.




