ಸಾಮಾಜಿಕ ಅಂತರ ಮರೆತು ಜಮೀರ್ ಅಹ್ಮದ್‌ಗೆ ಪಾದ ಪೂಜೆ..!

ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಹರಡುತ್ತಿದೆ. ಸಾಮಾಜಿಕ ಅಂತರದಿಂದಿರಿ, ಮಾಸ್ಕ್ ಧರಿಸಿ ಅಂತಾ ಸಾವಿರ ಸಾವಿರ ಬಾರಿ ಬಡ್ಕೊಂಡ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ.

ಬರೀ ಸಾಮಾನ್ಯ ಜನರಷ್ಟೇ ಅಲ್ಲದೇ, ಕೆಲ ರಾಜಕೀಯ ಮುಖಂಡರು ಕೂಡ ಇಂತಹ ಕೆಲಸ ಮಾಡ್ತಿದ್ದಾರೆ. ಕೆಲ ದಿನಗಳ ಹಿಂದೆ ಸಚಿವ ಶ್ರೀರಾಮುಲುಗೆ ಜೈ ಕಾರದ ಮೆರವಣಿಗೆ ಮಾಡಲಾಗಿತ್ತು. ಮಾಜಿ ಸಚಿವರೊಬ್ಬರು ತಮ್ಮ ಮಗಳ ಮದುವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನ ಕರೆಸಿ, ಮದುವೆ ಮಾಡಿಸಿದ್ದರು. ಮೊನ್ನೆ ಮೊನ್ನೆ ತಾನೇ ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಸಾಮಾಜಿಕ ಅಂತರ ಮರೆತು ಪ್ರತಿಭಟನೆಮಾಡಿದರು. ಈಗ ಮಾಜಿ ಸಚಿವ ಜಮೀರ್ ಅಹಮ್ಮದ್ ಸರದಿ.

ಜೂನ್ 28ರಂದು ಕೆಂಪೇಗೌಡ ನಗರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು, ಅಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ಗೆ ಪಾದಪೂಜೆ ಮಾಡಲಾಗಿದೆ. ಚಾಮರಾಜಪೇಟೆಯಲ್ಲಿ ಬಂಗಾರದ ಮನುಷ್ಯ ಜಮೀರಣ್ಣ ಅಭಿಮಾನಿಗಳ ಸಂಘದಿಂದ ಈ ಕಾರ್ಯಕ್ರಮ ನಡೆದಿದ್ದು ಕೋವಿಡ್ ನಿಯಮಗಳನ್ನ ಗಾಳಿಗೆ ತೂರಿ ಜನ ಜಮೀರ್‌ ಅಹಮದ್‌ರ ಕಾಲು ತೊಳೆದು, ಹೂ ಹಾಕಿ ಪಾದಪೂಜೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ, ಈ ವೇಳೆ ಜಮೀರ್ ಅಹಮ್ಮದ್, ಬಂಗಾರದ ಮನುಷ್ಯ ಜಮೀರಣ್ಣ ಅನ್ನೋ ಫೊಟೋ ಬಿಡುಗಡೆ ಮಾಡಿದ್ದಾರೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author