ತಮಿಳುನಾಡಿನಲ್ಲಿ ಬಾಯ್ಲರ್ ಸ್ಫೋಟ ನಾಲ್ವರ ಸಾವು, 17 ಮಂದಿಗೆ ಗಾಯ..!

ತಮಿಳುನಾಡು: ಇಂದು ಬೆಳಿಗ್ಗೆ ತಮಿಳುನಾಡಿನ ಕಡಲೂರು ಜಿಲ್ಲೆಯ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ, 17 ಮಂದಿ ಗಾಯಗೊಂಡಿದ್ದಾರೆ.

ರಾಜ್ಯ ರಾಜಧಾನಿ ಚೆನ್ನೈನಿಂದ 180 ಕಿ.ಮೀ ದೂರದಲ್ಲಿರುವ ಕಡಲೂರಿನ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ (ಹಿಂದೆ ಇದನ್ನು ನೆಯೆವೆಲಿ ಲಿಗ್ನೈಟ್ ಕಾರ್ಪೊರೇಶನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು) ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ.

https://youtu.be/PLWfuFu2Qgs

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಬಾಯ್ಲರ್ ಕಾರ್ಯನಿರ್ವಹಿಸುತ್ತಿಲ್ಲ. ಘಟನೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ವಿದ್ಯುತ್ ಸ್ಥಾವರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿದ್ಯುತ್ ಸ್ಥಾವರದಲ್ಲಿ ಎರಡು ತಿಂಗಳಲ್ಲಿ ಇದು ಸೇರಿ ನಡೆದ ಎರಡನೇ ಸ್ಫೋಟವಾಗಿದೆ.

ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ರಿಂದ ತಮಿಳುನಾಡು ಸಿಎಂ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಶಾ, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author