ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಜ್ಞಾ ಕಾರ್ಯಕ್ರಮದ ಪ್ರಯುಕ್ತ ಅಳವಡಿಸಿರುವ ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರಿಗೆ ಇಂದು ಭಾರತೀಯ ಜನತಾ ಪಕ್ಷದ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾದ ಕಾರ್ಯಕರ್ತರು ದೂರು ನೀಡಿದರು.

ಇಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧ್ಯಕ್ಷರಾದ ಅಭಿಲಾಷ್ ರೆಡ್ಡಿ ಎಂ ನೇತೃತ್ವದಲ್ಲಿ ದೂರು ನೀಡಿದ ನಂತರ ಮಾತನಾಡಿದ ಅವರು, ಕೋವಿಡ್ ಸಂಧರ್ಭದಲ್ಲಿ ಬಿಬಿಎಂಪಿ ನಗರದ ಸ್ವಾಸ್ತ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಆದರೆ, ನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ಹಾಕಬಾರದು ಎನ್ನುವ ಆದೇಶವಿದ್ದರೂ ಕೂಡಾ ಪ್ರತಿಜ್ಞಾ ಕಾರ್ಯಕ್ರಮದ ಅಂಗವಾಗಿ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ಅಳವಡಿಸಿ ನಗರದ ಸೌಂದರ್ಯವನ್ನು ಹಾಳೂಮಾಡುತ್ತಿದ್ದಾರೆ. ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ಈ ಕೂಡಲೇ ತಗೆದು ಹಾಕಿ ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತರಾದ ಅನಿಲ್ ಕುಮಾರ್ ಅವರನ್ನು ಒತ್ತಾಯಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಈ ಕೂಡಲೇ ಅನಧಿಕೃತವಾಗಿ ಹಾಕಿರುವ ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ತೆಗೆದು ಹಾಕಲು ಹಾಗೂ ಅಂತಹ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ರಾಜೇಶ್ ಆರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

